ಸುದೀಪ್ ಸಿನಿಮಾ ಬಗ್ಗೆ ಮಾತನಾಡಿದ ಪವರ್ ಸ್ಟಾರ್ ಪುನೀತ್..!

0
91

ಇತ್ತೀಚೆಗಷ್ಟೇ ಸುದೀಪ್ ಅವರು ಅಭಿನಯಿಸಿ ನಿರ್ಮಿಸಿದ್ದ ಚಿತ್ರ ಅಂಬಿ ನಿಂಗ್ ವಯಸ್ಸಾಯ್ತೋ. ಚಿತ್ರ ಸೆಟ್ಟೇರಿದಾಗಿನಿಂದಲೂ ಸಾಕಷ್ಟು ಸದ್ದು ಮಾಡುತ್ತಾ ಬಂದಿತ್ತು. ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವಿಷಯ ತಿಳಿದ ಕೂಡಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿತ್ತು.

 

 

ಇನ್ನು ತುಂಬಾ ದಿನದ ನಂತರ ಅಂಬರೀಶ್ ಅವರು ಲೀಡ್ ರೋಲ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ಚಿತ್ರ ಇದಾಗಿತ್ತು ಮತ್ತು ಈ ಚಿತ್ರದಲ್ಲಿ ಅಂಬರೀಷ್ ಅವರ ಜತೆ ನಟ ಕಿಚ್ಚ ಸುದೀಪ್ ಅವರು ಸಹ ಅಭಿನಯಿಸಲಿದ್ದಾರೆ ಎಂಬ ಸುದ್ದಿ ತಿಳಿದ ನಂತರ ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿತ್ತು.

 

 

ಕಳೆದ ವಾರವಷ್ಟೇ ಈ ಚಿತ್ರ ಬಿಡುಗಡೆಯಾಗಿದ್ದು ಚಿತ್ರ ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಂಡು ಉತ್ತಮ ಪ್ರದರ್ಶನವನ್ನು ಕಾಣುತ್ತಿದೆ ಅಂಬಿ ನಿಂಗ್ ವಯಸ್ಸಾಯ್ತೊ.ಇನ್ನು ಈ ಚಿತ್ರವನ್ನು ಹಲವಾರು ಸೆಲೆಬ್ರಿಟಿಗಳು ಈಗಾಗಲೇ ವೀಕ್ಷಿಸಿದ್ದು ಒಳ್ಳೆಯ ವಿಮರ್ಶೆಗಳನ್ನು ನೀಡುತ್ತಿದ್ದಾರೆ.

 

 

ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರವನ್ನು ವೀಕ್ಷಿಸಿದ್ದು ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಚಿತ್ರ ವೀಕ್ಷಿಸಿದ ಪುನೀತ್ ರಾಜ್ ಕುಮಾರ್ ಅವರು ಅಂಬರೀಶ್ ಮತ್ತು ಸುದೀಪ್ ಅವರ ಅಭಿನಯದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದು ಚಿತ್ರ ಇಷ್ಟವಾಯಿತು ಎಂದು ಹೇಳಿದ್ದಾರೆ.

 

 

ಇನ್ನು ಪುನೀತ್ ರಾಜ್ ಕುಮಾರ್ ಅವರು ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರದ ಬಗ್ಗೆ ಮಾತನಾಡಿರುವ ವಿಡಿಯೋವನ್ನು ಕಿಚ್ಚ ಸುದೀಪ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

 

 

 

LEAVE A REPLY

Please enter your comment!
Please enter your name here